ಬೆಳಗಾವಿ :–
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಮೂಲಕ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ,
ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ಲಕಾರ್ಡ್ ಹಿಡಿದು ಭಾಗಿಯಾಗಿದ್ದರು.
ಅಧಿಕಾರ ಇರುವ ಕಡೆಗಳಲ್ಲಿ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.





