“ರಾಜ್ಯದ ೮೮ ಜನ ಪೊಲೀಸರೇ ದೊಡ್ಡ ಕ್ರಿಮಿನಲ್ಸ್”​​ : ಲೆಕ್ಕ ಕೊಟ್ಟ ಗ್ರಹ ಸಚಿವ

ಬೆಳಗಾವಿ :–

ಕರ್ನಾಟಕದಲ್ಲಿ ಕಳ್ಳತನ, ಕಳವಿಗೆ ನೆರವು,ಕಳ್ಳರ ಜೊತೆ ಶಾಮೀಲು ಇನ್ನಿತರ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ 88 ಮಂದಿ ಪೊಲೀಸರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಸ್ಪೆoಡ್ ಮಾಡಲಾಗಿದೆ.

೮೮ ಪೊಲೀಸರ ಮೇಲಿನ ಪ್ರಕರಣ ಸಾಬೀತಾದಲ್ಲಿ ಮುಲಾಜಿಲ್ಲದೇ ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್​​ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ “ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ ೮೮ ಪೊಲೀಸರು ಅಪರಾಧ ಕೃತ್ಯಗಳಲ್ಲಿ” ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ರಾಜ್ಯದಲ್ಲಿ ೧೦೯೯ ಪೊಲೀಸ್ ಠಾಣೆಗಳು ೧.೦೬ ಲಕ್ಷ ಮಂದಿ ಸಿಬ್ಬಂದಿಯಿದ್ದು ಅವರ ಉತ್ತಮ ಕೆಲಸ ಕರ್ತವ್ಯ ದಕ್ಷತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಜೊತೆ ಜೊತೆಗೆ ಕೆಲವೇ ಕೆಲವು ಪೊಲೀಸರು ಅಪರಾಧ ಕೃತ್ಯಗಳಲ್ಲಿ ತೊಡಗಿ ಇಲಾಖೆಗೆ ಕೆಟ್ಟ ಹೆಸರು ತರುವುದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

Share this post:

Leave a Reply

Your email address will not be published. Required fields are marked *

You cannot copy content of this page