“ಕನ್ನಡಿಗರಿಗೆ ಗುಡ್ ನ್ಯೂಸ್ ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವಂತೆ ಸೂಚನೆ” : ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು :–

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ೩೧೭ ಗೂಡ್ ರೈಲು ವ್ಯವಸ್ಥಾಪಕ ಹುದ್ದೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪರೀಕ್ಷೆ ನಡೆಯಲು ಅನುಮತಿ ನೀಡಲಾಗಿತ್ತು.

ಅಧಿಸೂಚನೆಯಲ್ಲಿ, ಹುಬ್ಬಳ್ಳಿ ವಿಭಾಗದ ೧೦೧, ಮೈಸೂರು ವಿಭಾಗದ ೫೬ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

Share this post:

Leave a Reply

Your email address will not be published. Required fields are marked *

You cannot copy content of this page