ಬೆಂಗಳೂರು :–
ಸಂಸತ್ತಿನಲ್ಲಿ ಮಂಡಿಸಲಾದ ಅಧಿಕೃತ ಅಂಕಿ ಅಂಶಗಳ ಪ್ರಕಾರ, ೨೦೨೪ -೨೫ ರ ಶೈಕ್ಷಣಿಕ ವರ್ಷದ ವೇಳೆಗೆ ಭಾರತದ ೧೦.೧೩ ಲಕ್ಷ ಸರ್ಕಾರಿ ಶಾಲೆಗಳಲ್ಲಿ ಒಟ್ಟು ೫,೧೪೯ ಶಾಲೆಗಳು ಶೂನ್ಯ ವಿದ್ಯಾರ್ಥಿಗಳ ದಾಖಲಾತಿಯನ್ನು ಹೊಂದಿದ್ದವು.
ಸದರಿ ಖಾಲಿ ಶಾಲೆಗಳಲ್ಲಿ ಶೇ.70ಕ್ಕಿಂತ ಹೆಚ್ಚು ತೆಲಂಗಾಣ ಹಾಗೂ ಪಶ್ಚಿಮ ಬಂಗಾಳದಲ್ಲಿವೆ. ಹೆಚ್ಚುವರಿಯಾಗಿ, ೧೦ ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ ೬೫.೦೫೪ ಕ್ಕೆ ಏರಿದೆ.





