ಬೆಂಗಳೂರು :–
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗದ ಮತ್ತು ಈಗಾಗಲೇ ಸ್ಥಗಿತಗೊಂಡಿರುವ 569 ಮದ್ಯದಂಗಡಿಗಳ ಸನ್ನದು ಹರಾಜು ಪ್ರಕ್ರಿಯೆಯನ್ನು ಅಬಕಾರಿ ಇಲಾಖೆ ಆರಂಭಿಸಿದೆ.
ಬಳಕೆಯಲ್ಲಿ ಇಲ್ಲದ ಸನ್ನದುಗಳನ್ನು ಹರಾಜು ಮಾಡಲಾಗುತ್ತದೆ ಎಂದು ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದು,
ಅದರಂತೆ ಸೋಮವಾರದಿಂದ ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ. “ಎಂಎಸ್‌ಟಿಸಿ ಲಿಮಿಟೆಡ್‌ನ ಇ-ಪೋರ್ಟಲ್” ಮೂಲಕ ಹರಾಜು ಪ್ರಕ್ರಿಯೆ ನಡೆಯಲಿದೆ.





