ಬೆಳಗಾವಿ :–
ರಾಜ್ಯದ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ೨೪ ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು,
ಇಂದಿನಿಂದ (ಸೋಮವಾರ)ದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.





