ಬೆಂಗಳೂರು :–
ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ನಿಧಿ ಆಸೆಗೆ 8 ತಿಂಗಳ ಮಗುವನ್ನು ಬಲಿ ನೀಡಲು ಪೋಷಕರು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮನೆಯಲ್ಲಿ ಗುಂಡಿ ತೆಗೆದು ಪೂಜೆ ನಡೆಸುತ್ತಿರುವಾಗ ಮಕ್ಕಳ ರಕ್ಷಣಾ ಘಟಕ ದಾಳಿ ಮಾಡಿ ಮಗುವನ್ನು ರಕ್ಷಿಸಿದೆ.
ಸೈಯದ್ ಇಮ್ರಾನ್ ಮತ್ತು ಆತನ ಪತ್ನಿ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿದೆ ಎನ್ನಲಾಗಿದ್ದು, ಘಟನೆ ಬಗ್ಗೆ ಮಕ್ಕಳ ರಕ್ಷಣಾ ಕಲ್ಯಾಣ ಸಮಿತಿಯಿಂದ ತನಿಖೆ ನಡೆಯುತ್ತಿದೆ.





