“ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ಇನ್ನಿಲ್ಲ”

ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಸುರೇಶ್ ಕಲ್ಮಾಡಿ ತಮ್ಮ ೮೨ ನೇ ವಯಸ್ಸಿನಲ್ಲಿ ಪುಣೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.

೬ ವರ್ಷ ವಾಯುಪಡೆ ಪೈಲಟ್ ಆಗಿ ಸೇವೆ ಸಲ್ಲಿಸಿದ ನಂತರ ಕಾಂಗ್ರೆಸ್‌ ಸೇರಿಕೊಂಡ ಕಲ್ಮಾಡಿ, ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದರು.

೨೦೧೦ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ೨೦೧೧ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ಉಡುಪಿ ಬಳಿಯ ಕಲ್ಮಾಡಿ ಸುರೇಶ್ ಅವರ ಕುಟುಂಬದ ತವರೂರು ಎಂದು ವರದಿಯಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page