ಬೆಳಗಾವಿ :–
ಇಂದು ಬೆಳಗಾವಿ ನಗರದಲ್ಲಿ ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ.,ಬೆಳಗಾವಿ ಪ್ರಧಾನ ಕಛೇರಿಯಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಧ್ವಜಾರೋಹಣ ನೆರವೇರಿಸಿ,ರಾಷಧ್ವಜಕ್ಕೆ ಗೌರವ ನಮನ ಸಲ್ಲಿಸ,ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ. ಆರ್.ಅಂಬೇಡ್ಕರ ಜಿ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಜಗತ್ತಿಗೆ ಮಾದರಿಯಾದ ಭಾರತೀಯ ಸಂವಿಧಾನ ಜಾರಿಗೆ ಬಂದ ಈ ಪವಿತ್ರ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುತ್ತಾ, ಸದೃಢ ದೇಶ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.





