ಚಿಕ್ಕೋಡಿ :–
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಗೌರವಯುತವಾದದ್ದು, ವಿದ್ಯಾರ್ಥಿಗಳು ವೃತ್ತಿಪರ ನೈತಿಕತೆಗಳನ್ನು ಕಾಪಾಡಿಕೊಂಡು ಸೇವಾಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಶಿಕ್ಷಕರಾದ ಎಂ.ಕೆ ಜೈನಾಪುರ್ ಹೇಳಿದರು. ಇತ್ತೀಚಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಕಲಿಕೆಯ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಚೌಸನ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರೌಢಶಾಲೆ, ನವಲಿಹಾಳ ಇವರ ಸಂಯುಕ್ತ ಆಶ್ರಯ ನವಲಿಹಾಳ ಸರ್ಕಾರಿ ಪ್ರೌಢಶಾಲೆ ದಲ್ಲಿ ನಡೆದ ಸಮೂಹ ಪಾಠ ಬೋಧನೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
. ಚೌಸನ್ ಫೌಂಡೇಶನ್ ನಡೆಸುತ್ತಿರುವ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತಿವೆ ಎಂದು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೌಸನ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿರುವ ಪ್ರಮಾಣಪತ್ರಗಳು ಹಾಗೂ ಸ್ಮರಣಿಕೆಗಳು ಅತ್ಯಂತ ಪ್ರೇರಣಾದಾಯಕವಾಗಿವೆ ಎಂದು ಹೇಳಿದರು. ಶಿಕ್ಷಣದ ಪ್ರಗತಿಗಾಗಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವ ಚೌಸನ್ ಫೌಂಡೇಶನ್ ವ್ಯವಸ್ಥಾಪಕರಾದ ಶ್ರೀ ಸುರೇಂದ್ರನಾಥ ಟಿ. ಚೌಗುಲೆ ಹಾಗೂ ಮಾಜಿ ಶಾಸಕರಾದ ಶ್ರೀಮತಿ ಶಕುಂತಲಾ ಟಿ. ಚೌಗುಲೆ ಅವರ ಕಾರ್ಯ ನಿಜಕ್ಕೂ ಪ್ರಶಂಷನೀಯವಾದದ್ದು ಎಂದು ಹೇಳಿದರು.
. ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಧ್ಯಾಪಕರಾದ ಡಾಕ್ಟರ್ ಎನ್ ಎಸ್ ಸಿಂದೆ ಯವರು ವಿದ್ಯಾರ್ಥಿಗಳು ಹೆಚ್ಚಿನ ಪುಸ್ತಕಗಳನ್ನು ಓದಿ, ಚಿಂತನಾ ಶಕ್ತಿಯನ್ನು ವೃದ್ಧಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಸಲಹೆ ನೀಡಿದರು
ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಧ್ಯಾಪಕರಾದ ಡಾಕ್ಟರ್ ಕೆ ಡಿ ಕನಕಗಿರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಲಿಕೆಯಲ್ಲಿ ಗುಣಾತ್ಮಕ ಸುಧಾರಣೆ ತರುವ ಸಲುವಾಗಿ ವಿದ್ಯಾರ್ಥಿಗಳಿಗೆ ವಿಷಯವಾರು ಪರೀಕ್ಷೆಯನ್ನು ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು . ವಿಷಯವಾರು ಪರೀಕ್ಷೆಯಲ್ಲಿ ಅಗ್ರ 3 ಸ್ಥಾನ ಪಡೆದ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕರಾದ ಎಸ್.ಜಿ. ಸೌಂದಲಗಿ ವಹಿಸಿದ್ದರು
ಕಾರ್ಯಕ್ರಮದಲ್ಲಿ ಎಂ ಎಚ್ .ರಾವುತಪ್ಪ ಎಸ್.ಆರ್. ಚೌಗುಲೆ, ಪಿ.ಆರ್. ಹೇರವಣ್ಣವರ ಹಾಗೂ ಬಿ.ಎ. ಹರಗಪೂರ ಪೂಜಾ ಕಾಂಬಳೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನಿತಾ ಪೋತದಾರ್ ನಿರ್ವಹಿಸಿದರು ಸೌಮ್ಯ ಮುಖುಂದ ಸ್ವಾಗತಿಸಿದರು ಶ್ರೇಯಾ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು ಚಂದ್ರಬಾಗ್ ಸಂಗಡಿಗರು ಸ್ವಾಗತಿ ಗೀತೆ ಹಾಡಿದರು ಲಕ್ಷ್ಮೀ ಪಾಟೀಲ್ ವಂದಿಸಿದರು





