ಬೆಂಗಳೂರು :–
ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಸಮವಸ್ತ್ರ , ಕ್ರೀಡಾ ಉಡುಪು ಹಾಗೂ ಶೂ ನೀಡಲು ನಿರ್ಧರಿಸಿದ್ದು, ಇದಕ್ಕಾಗಿ ₹33.06 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.
ಕಲಬುರಗಿಯ ಜವಳಿ ಪಾರ್ಕ್ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರದ ‘ಪಿಎಂ-ಮಿತ್ರ’ ಯೋಜನೆಯಡಿ ಜವಳಿ ಪಾರ್ಕ್ ಅನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.





