ಬೆಂಗಳೂರು :–
ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಶುಕ್ರವಾರ ಒಂದು ತಿಂಗಳು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪತ್ನಿ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. “ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ” ಎಂದು ಸಿಎಂ ಬರೆದಿದ್ದಾರೆ.





