ಬೆಂಗಳೂರು :–
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪ್ರತ್ಯೇಕವಾದ ಸಹಾಯ ಮತ್ತು ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕೇಂದ್ರಗಳು ಸಾರ್ವಜನಿಕರು ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕಂಪ್ಯೂಟರ್, ಇಂಟರ್ ನೆಟ್- ಪ್ರಿಂಟರ್, ಸ್ಕ್ಯಾನರ್ ಸೌಲಭ್ಯ ಹೊಂದಿರಬೇಕು.
ಅಲ್ಲದೇ ಕುರ್ಚಿಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು. ಇವುಗಳನ್ನು ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ ಎಂದು ವರದಿ.





