ಬೆಳಗಾವಿ :–
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಚವಾನೆ ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂನ ಎಲ್ ಪಿ ಜಿ ಬಾಟ್ಲಿಂಗ್ ಸ್ಥಾವರಕ್ಕೆ ನೀರು ನುಗ್ಗಿದ ನಂತರ ಸುಮಾರು ೩,೦೦೦ ಎಲ್ ಪಿ ಜಿ ಸಿಲಿಂಡರ್‌ಗಳು ಪಾತಾಳಗಂಗಾ ನದಿಯಲ್ಲಿ ಕೊಚ್ಚಿ ಹೋಗಿವೆ.
ತುಂಬಿದ ಮತ್ತು ಖಾಲಿ ಸಿಲಿಂಡರ್‌ಗಳು ನೀರಿನಲ್ಲಿ ತೇಲುತ್ತಿರುವ ವಿಡಿಯೋ ವೈರಲ್ ಆಗಿದೆ.
ಸಾರ್ವಜನಿಕರು ಯಾವುದೇ ಸಿಲಿಂಡರ್‌ಗಳನ್ನು ಮುಟ್ಟಬಾರದು ಅಥವಾ ಮನೆಗೆ ತೆಗೆದುಕೊಂಡು ಹೋಗಬಾರದು. ಸಿಲಿಂಡರ್ ಕಂಡರೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಕಿಶನ್ ಜವಾಲೆ ಸೂಚಿಸಿದ್ದಾರೆ.





