ಬೆಂಗಳೂರು :–
ಕರ್ನಾಟಕ ರಾಜ್ಯದ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – ೨೦೨೬’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಹೊರಟಿರುವುದು ಕಾನೂನು ಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.





