ಬೆಂಗಳೂರು :–
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಲೋಕಾಯುಕ್ತ ಸಲ್ಲಿಸಿದ ಪ್ರಾಸಿಕ್ಯೂಷನ್ ಅರ್ಜಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
ಜಮೀರ್ ಅವರು ವಾರ್ಷಿಕ ಆದಾಯಕ್ಕಿಂತ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.





