ಬೆಂಗಳೂರು :–
ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಜುಲೈ ೧೫ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ೮೫ನೇ ವಯಸ್ಸಿನ ಚೆನ್ನಮ್ಮ ಅವರಿಗೆ ಕಳೆದ ೩ ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು.





