ಬೆಂಗಳೂರು :–
ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಸಚಿವರ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಚಿವ ಜಮೀರ್ ಅಹ್ಮದ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ ,
ಅವರ ಬದಲು ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದ್ದು, ವಿಜಯನಗರ ಜಿಲ್ಲೆಯ ಉಸ್ತುವಾರಿಯಾಗಿ ಸಚಿವ ಬಸವಂತಪ್ಪ ಅವರನ್ನು ನೇಮಿಸಲಾಗಿದೆ ಎಂದು ವರದಿ ತಿಳಿಸಿದೆ.
ತಮಗೆ ಯಾವುದೇ ಜಿಲ್ಲೆಯ ಉಸ್ತುವಾರಿಯ ಜವಾಬ್ದಾರಿ ಬೇಡ ಎಂದು ಜಮೀರ್ ಸಿಎಂಗೆ ಪತ್ರ ಬರೆದಿದ್ದರು.





