ಹೊಸ ದೆಹಲಿ :–
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಮುಂದಿನ ವಾರ ಪುನಾರಚನೆಯಾಗುವ ಸಾಧ್ಯತೆಯಿದೆ. ಈ ವೇಳೆ, ೭೦ ವರ್ಷ ದಾಟಿದ
ಸುಮಾರು ೧೪ ಸಚಿವರ ಬದಲಿಗೆ, ಅವರ ಸ್ಥಾನಕ್ಕೆ ಯುವ ಮುಖಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಲ್ಲಿ ಹೇಳಿದೆ.
ಯುವಕರು ಮತ್ತು ಹೊಸ ಮುಖಗಳಿಗೆ ಆದ್ಯತೆ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.





