ಬೆಂಗಳೂರು :–
ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ ಸರ್ಕಾರ,
ಫಲಾನುಭವಿ “ಮಹಿಳೆಯ ಆಧಾರ್ ಜತೆಗೆ ಪತಿಯ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ”.
ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮರುಪರಿಶೀಲನೆ ಆರಂಭವಾಗಲಿದ್ದು, ಯೋಜನೆಯನ್ನು “ರಾಜ್ಯದ ಫಲಾನುಭವಿಗಳಿಗೆ ಮಾತ್ರ ಸೀಮಿತಗೊಳಿಸಲು” ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಹಣ ಪಾವತಿಸಲು ಸಾಧ್ಯವಾಗದೆ ಸರ್ಕಾರ ಹೊಸ ಷರತ್ತುಗಳ ಮೂಲಕ ಕಿರುಕುಳ ನೀಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.





