“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆ” – ಗಣೇಶ ಹುಕ್ಕೇರಿ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–

“ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಭೂತಪೂರ್ವ ಜನ ಬೆಂಬಲ”

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಲಿದೆ. ಮೇ ೧೦ ರಂದು ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ ಹೇಳಿದರು.

ಚಿಕ್ಕೋಡಿ-ಸದಲಗಾ ಕ್ಷೇತ್ರ ವ್ಯಾಪ್ತಿಯ ನಾಯಿಂಗ್ಲಜ, ಧುಳಗನವಾಡಿ, ಕುಠಾಳಿ ಗ್ರಾಮದಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ವಾಗ್ದಾನ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಪ್ರತಿ ಮಹಿಳೆಗೆ ೨ ಸಾವಿರ ರೂ, ಗೃಹಜ್ಯೋತಿ ಯೋಜನೆಯಡಿ ೨೦೦ ಯುನಿಟ್ ವಿದ್ಯುತ್ ಉಚಿತ, ಯುವನಿಧಿ ಯೋಜನೆಯಡಿ ಪದವಿಧರಿಗೆ ೩ ಸಾವಿರ ಮತ್ತು ಡಿಪ್ಲೋಮಾ ಯುವಕರಿಗೆ ೧೫೦೦ ರೂ ಭತ್ಯೆ, ಅನ್ನಭಾಗ್ಯ ಯೋಜನೆಯಡಿ ೧೦ ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ ನೀಡುವ ಗ್ಯಾರಂಟಿ ಯೋಜನೆ ರಾಜ್ಯದ ಜನರಿಗೆ ನೀಡಲು ಕಾಂಗ್ರೆಸ್ ಪಕ್ಷ ಬಯಸಿದೆ.

ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಲಿದೆ. ಡಿ.ಕೆ.ಶಿವುಕುಮಾರ ಮತ್ತು ಸಿದ್ದರಾಮಯ್ಯ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ತುಂಭೆಲ್ಲ ಪ್ರವಾಸ ಮಾಡುತ್ತಿದ್ದಾರೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ನನಗೆ ಅತ್ಯಧಿಕ ಮತಗಳನ್ನು ನೀಡಿ ಆಯ್ಕೆ ಮಾಡಬೇಕು ಎಂದರು.
ಚಿಕ್ಕೋಡಿ- ಸದಲಗಾ ಕ್ಷೇತ್ರದ ಜನರು ನಮ್ಮ ಕುಟುಂಬ ಸದಸ್ಯರಿದ್ದು. ಅವರ ಕಷ್ಟ ಸುಖದಲ್ಲಿ ನಾವು ಭಾಗಿಯಾಗಿದ್ದೇವೆ.

ಕೊರೊನಾ ಮತ್ತು ಪ್ರವಾಹ ಸಂದರ್ಭದಲ್ಲಿ ಜನರ ಜೊತೆ ಇದ್ದು ಕೆಲಸ ಮಾಡಲಾಗಿದೆ. ಈಗಾಗಲೇ ಕ್ಷೇತ್ರದ ಜನ ನನಗೆ ಎರಡು ಬಾರಿ ಅವಕಾಶ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿದ್ದಿರೀ.ಈಗ ಮತ್ತೋಮ್ಮೆ ಜನ ಸೇವೆ ಮಾಡಲು ಹ್ಯಾಟ್ರಿಕ ಗೆಲುವಿಗೆ ಬೆಂಬಲ ನೀಡಬೇಕು. ನಿಮ್ಮ ಮನೆ ಮಗನಾಗಿ ಸೇವೆ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವುಕುಮಾರ ಕಮತೆ, ಸಂತೋಷ ಕಮತೆ, ಚೆತನ ಮಗದುಮ್ಮ, ಕಾಕಾಸಾಹೇಬ ಚಿಮನೆ, ಬಸಗೌಡ ಕಮತೆ, ಅಜೀತ ಯಲ್ಲೂರೆ, ವಿಕಾಸ ಕಮತೆ, ಬಿ.ಎಸ್.ಪಾಟೀಲ, ದೀಪಕ ದಿವಟೆ, ವಿಠ್ಠಲ ಕಲ್ಲಪೂರೆ ಮುಂತಾದವರು ಇದ್ದರು.


Share with Your friends

You May Also Like

More From Author

+ There are no comments

Add yours