“ಕೇಂದ್ರದ ಬಿಜೆಪಿ ಸರ್ಕಾರ ಕಳೆದ ೯ ವರ್ಷಗಳಲ್ಲಿ ದೇಶದಲ್ಲಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ದೇಶ ವಿಶ್ವಗುರುವಾಗುವತ್ತ ದಾಪುಗಾಲು ಇಟ್ಟಿದೆ” – ಸಂಸದ ಅಣ್ಣಾಸಾಹೇಬ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–


ಕೇಂದ್ರದ ಬಿಜೆಪಿ ಸರ್ಕಾರ ಕಳೆದ ೯ ವರ್ಷಗಳಲ್ಲಿ ದೇಶದಲ್ಲಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ದೇಶ ವಿಶ್ವಗುರುವಾಗುವತ್ತ ದಾಪುಗಾಲು ಇಟ್ಟಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ಅವರು ಶನಿವಾರ ತಾಲುಕಿನ ಸಮೀಪದ ಕರೋಶಿ ಗ್ರಾಮದಲ್ಲಿ ಪಿಕೆಪಿಎಸ್ ಸಭಾಭವನದಲ್ಲಿ ಹಮ್ಮಿಕೊಂಡ ಕೇಂದ್ರ ಸರ್ಕಾರ ‘ಕಳೆದ ೯ ವರ್ಷಗಳ ಆಡಳಿತಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಮಾಡಿರುವ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದರು.

ಕೇಂದ್ರ ಬಿಜೆಪಿ ಸರ್ಕಾರ ದೇಶವನ್ನು ಸರ್ವ ರಂಗಗಳಲ್ಲೂ ಸಶಕ್ತಗೊಳಿಸುವ ಮೂಲಕ ವಿಶ್ವದ ಬಲಾಢ ರಾಷ್ಟ್ರವನ್ನಾಗಿ ರೂಪುಗೊಂಡಿದ್ದು ಕಳೆದ ೯ ವರ್ಷಗಳಲ್ಲಿ ಉಜ್ವಲ ಯೋಜನೆಯಡಿ ದೇಶದ ೯.೬೦ ಕೋಟಿ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಎರಡು ವರ್ಷಗಳಿಂದ ೮೦ ಕೋಟಿ ಕುಟುಂಬಗಳಿಗೆ ಉಚಿತ ಪಡಿತರ, ಪಿಎಂ ಆವಾಸ್ ಯೋಜನೆಯಡಿ ೩ ಕೋಟಿಗೂ ಅಧಿಕ ಮನೆಗಳು, ಸ್ವಚ್ಛ ಭಾರತ ಯೋಜನೆಯಡಿ ೧೧.೭೨ ಕೋಟಿ ಶೌಚಾಲಯಗಳ ನಿರ್ಮಾಣ, ಜೆಜೆಎಂ ಯೋಜನೆಯಡಿ ೧೨ ಕೋಟಿ ಅಧಿಕ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ, ೨೭ ಕೋಟಿಗೂ ಹೆಚ್ಚು ಜನರಿಗೆ ಮುದ್ರಾ ಯೋಜನೆಯಡಿ ಸಾಲ ವಿತರಿಸಲಾಗಿದೆ ಎಂದು ತಿಳಿಸಿದರು.
ದೇಶ ಸಾರಿಗೆ, ಸಂಪರ್ಕ ಕ್ಷೇತ್ರದಲ್ಲೂ ಅಮೂಲಾಗ್ರ ಬೆಳವಣ ಗೆ ಕಂಡಿದೆ. ೨೪ ರಷ್ಟಿದ್ದ ವಿಮಾನ ನಿಲ್ದಾಣಗಳನ್ನು ೧೪೪ಕ್ಕೆ ಹೆಚ್ಚಿಸಿದೆ. ಗ್ರಾಮೀಣ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸಿದೆ. ಮೆಟ್ರೊ ರೈಲು ಸೇವೆಯನ್ನು ಹಲವು ಮಹಾನಗರಗಳಿಗೆ ಪರಿಚಯಿಸಿದೆ. ೫೮ ಕೋಟಿ ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಸೇವೆ ಒದಗಿಸಿದೆ. ವೈದ್ಯಕೀಯ ಕಾಲೇಜುಗಳನ್ನು ೩೮೭ ರಿಂದ ೬೯೭ಕ್ಕೆ ಹೆಚ್ಚಿದೆ ಇಂತಹ ಹತ್ತು ಹಲವು

ರಾಯಬಾಗ ವಿಧಾನಸಭೆ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ಕೇಂದ್ರದಲ್ಲಿ ಕಳೆದ ೯ ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಗಮನಾರ್ಹ ಎಂದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೇರ್ಲೆ, ಮಂಡಳ ಅಧ್ಯಕ್ಷ ಬಸವರಾಜ ಪಾಟೀಲ,ವ ದುಂಡಪ್ಪ ಬೆಂಡವಾಡೆ, ಸತೀಶ ಅಪ್ಪಾಜಿಗೋಳ, ಮಹೇಶ ಭಾತೆ ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours