“ಗೃಹಲಕ್ಷ್ಮೀ ಪೂರ್ಣ ಬಾಕಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬದ ವೇಳೆಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು”- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಂಗಳೂರು :–

“ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿಗೆ ಶೀಘ್ರವೇ ಹಣವನ್ನು ಬಿಡುಗಡೆ”

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ, ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ‌ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಯೋಜನೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ ನಂತರ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆದರು. ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ಗೃಹಲಕ್ಷ್ಮೀ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡ ಅವರು, ಆದಷ್ಟು ಬೇಗ ಅರ್ಜಿ ವಿಲೇವಾರಿ ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದರು.

ಈ ವೇಳೆ, ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ ಸಿಡಿಪಿಒ ತಿಳಿಸಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಹಣವನ್ನು ನೇರವಾಗಿ ಅಂಚೆ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ, ರಾಜ್ಯದ ಮಹಿಳೆಯರು ಅಂಚೆ ಇಲಾಖೆಯಲ್ಲಿ

ಖಾತೆ ತೆರೆಯುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದ

ಅವರು ಇದೇವೇಳೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆದರೆ ಅರ್ಹ ಗೃಹಿಣಿಯರ ಖಾತೆಗೆ ಒಟ್ಟಾಗಿ 6,000 ರೂಪಾಯಿ ಜಮಾ ಆಗಲಿದೆ ಎಂದು ಆಶ್ವಾಸನೆ ನೀಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪಂಚ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ, ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ.

ಆಗಸ್ಟ್ 15ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ದರೆ ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ದರೂ, ಪೂರ್ಣ ಬಾಕಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬದ ವೇಳೆಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಇನ್ನು 15 ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಪರಿಹಾರ ಆಗಲಿದೆ ಎಂದು ಮಹಿಳಾ ಕಲ್ಯಾಣ ಸಚಿವೆ, ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


Share with Your friends

You May Also Like

More From Author

+ There are no comments

Add yours