” ಗೊಂದಲದ ಗೂಡಾಗಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಸಾಹೇಬ ಜೊಲ್ಲೆ ಘೋಷಣೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಹೆಸರು ಫೈನಲ್ ಆಗಿ ಘೋಷಣೆಯಾಗಿದೆ

ಕೆನರಾ ಹಾಗೂ ಕೆನರಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೇಸರು ಎರಡನೆಯ ಪಟ್ಟಿಯಲ್ಲೂ ಘೋಷಣೆಯಾಗಿಲ್ಲ,ಈ ಎರಡೂ ಕ್ಷೇತ್ರಗಳು ಈವರೆಗೂ ಕಗ್ಗಂಟಾಗಿವೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಅನೇಕ ಆಕಾಂಕ್ಷಿಗಳು ಇದ್ದಾರೆ ಬೆಳಗಾವಿ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತದೆ ಎನ್ನುವ ವಿಚಾರ ತೀವ್ರ ಕುತೂಹಲ ಕೆರಳಿಸಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತದಾರಲ್ಲಿ ಕುತೂಹಲ ಕೆರಳಿಸಿರುವ, ಕಾದಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ? ಎಂಬ ಗೊಂದಲದ ಪ್ರಶ್ನೆಗೆ ಉತ್ತರ ದೊರೆಯಿತು.


Share with Your friends

You May Also Like

More From Author

+ There are no comments

Add yours