ಮತಗಟ್ಟೆಗಳ ಪರಿಶೀಲನೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದ ಸಂ.೧೦ರ ಸೂಕ್ಷ್ಮ ಮತಗಟ್ಟೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮತಗಟ್ಟೆ ಸಂ.14ಕ್ಕೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಮತಗಟ್ಟೆಗಳಲ್ಲಿ ಬೇಕಾದ ಅಗತ್ಯ ಸೌಲಭ್ಯಗಳನ್ನು ಮಾಡಬೇಕು. ಮತದಾನದ ದಿನದಂದು ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ತಾಪಂ ಇಒ ಟಿ.ಆರ್.ಮಲ್ಲಾಡದ, ಪಿಡಿಒ ಕವಿತಾ ವಾಘೆ, ಗ್ರಾಮ ಆಡಳಿತ ಅಧಿಕಾರಿ ಮಲ್ಲೇಶ ಕುರಿ, ಬಿಎಲ್ ಒಗಳಾದ ಸುಧಾ ಮಾಸೆವಾಡಿ, ಶೃತಿ ಮಠಪತಿ ಮೊದಲಾದವರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours