ಚಿಕ್ಕೋಡಿ”ಚಿಕ್ಕೋಡಿಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ.”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಚಾರರ್ಥವಾಗಿ ಹಮ್ಮಿಕೊಂಡಿದ್ದ ಬೃಹತ ಸಾರ್ವಜನಿಕ ಸಭೆಯನ್ನು ಮಾಜಿ ಕೇಂದ್ರ ಸಚಿವರು ಹಾಗೂ ವಿಜಯಪುರ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಸಚಿವರಾದ ಶ್ರೀ ಸಿ.ಟಿ ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ,ಶ್ರೀ. ಬಸವಪ್ರಸಾದ ಜೊಲ್ಲೆ ಹಾಗೂ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ ಯವರು ಭಾಗವಹಿಸಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಶ್ರೀ ನರೇಂದ್ರ ಮೋದಿ ಜಿ ಅವರು ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು 3ನೇ ಅವಧಿಗೆ ಪ್ರಧಾನಮಂತ್ರಿಯನ್ನಾಗಿಸಲು ಹಾಗೂ ಚಿಕ್ಕೋಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರಿಗೆ ತಮ್ಮ ಬೆಂಬಲ ನೀಡಿ,ಪ್ರಚಂಡ ಬಹುಮತಗಳಿಂದ ಆರಿಸಿ ತರಲು ಬೆಂಬಲ ನೀಡಬೇಕು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಹಣಮಂತ ನಿರಾಣಿ,
ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಶ್ರೀ ನಿಖಿಲ ಕತ್ತಿ, ಶ್ರೀ ಕಲ್ಲಪ್ಪ ಮೆಗ್ಗಣ್ಣವರ, ಲೋಕಸಭಾ ಪ್ರಭಾರಿಗಳಾದ ಶ್ರೀ ಪಿ.ಎಚ್ ಪೂಜಾರ,ಶ್ರೀ ಚಂದ್ರಶೇಖರ ಕವಟಗಿ,ಶ್ರೀ ಮಾರುತಿ ಅಷ್ಷಗಿ ಶ್ರೀ ಬಸವರಾಜ ಹುಂದ್ರಿ,ಶ್ರೀ ಶಹಜನ ಡೊಂಗರಗಾವ,ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ,ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

.


Share with Your friends

You May Also Like

More From Author

+ There are no comments

Add yours